ಮಹದೇಶ್ವರಸ್ವಾಮಿ ದೇವಾಲಯದ ಬಾಗಿಲು ಮುರಿದು ಹುಂಡಿ ಹಣ ಕಳ್ಳತನ.

ಮೈಸೂರು,ಮಾರ್ಚ್,15,2023(www.justkannada.in): ದುಷ್ಕರ್ಮಿಗಳು ದೇವಾಲಯದ ಬಾಗಿಲು ಮುರಿದು ಹುಂಡಿ ಹಣ ಕಳವು ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚುಂಚನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಮಾದಯ್ಯನಗುಡಿಯ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಈ  ಘಟನೆ ನಡೆದಿದೆ. ರಾತ್ರಿಯ ಸಮಯದಲ್ಲಿ ಕಳ್ಳರು ಒಳ ನುಗ್ಗಿ ಬಾಗಿಲು ಮುರಿದು, ಹುಂಡಿಯ ಬೀಗವನ್ನು ಒಡೆದು ಹುಂಡಿಯಲ್ಲಿದ್ದ ನಗದು ಹಣ ಹಾಗೂ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ.

ನಿನ್ನೆ ತಾನೇ ಎರಡು ದಿನಗಳ ಕಾಲ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆದಿತ್ತು. ಇಂದು ಗ್ರಾಮಸ್ಥರು ಹುಂಡಿ ಎಣಿಕೆ ಕಾರ್ಯ ಮಾಡಬೇಕಾಗಿತ್ತು. ಆದರೆ, ಖದೀಮರು ಹುಂಡಿಯಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಕವಲಂದೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: Nanjanagudu-Mahadeswaraswamy temple – money – stolen-thief