Sunday, August 2, 2026

BDA Apartments

Home Front Page ನಂಜನಗೂಡು ತಹಶೀಲ್ದಾರ್ ಮೋಹನ್ ಕುಮಾರಿ ಅವರ ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ.

ನಂಜನಗೂಡು ತಹಶೀಲ್ದಾರ್ ಮೋಹನ್ ಕುಮಾರಿ ಅವರ ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ.

ಮೈಸೂರು,ಸೆಪ್ಟಂಬರ್,28,2021(www.justkannada.in): ನಂಜನಗೂಡು ಹರದನಹಳ್ಳಿ ಮಹದೇವಮ್ಮ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಮೋಹನ್ ಕುಮಾರಿ‌ ಅವರ ವರ್ಗಾವಣೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ನಂಜನಗೂಡು ತಹಶೀಲ್ದಾರ್ ಕಚೇರಿ ಬಳಿ ಸಂಯುಕ್ತ ಕಿಸಾನ್ ಮೋರ್ಚಾ ವೀರಶೈವ ಲಿಂಗಾಯತ ಸಂಘಟನೆ, ದಲಿತ ಸಂಘಟನೆಗಳು ಒಕ್ಕೂಟ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ದಕ್ಷ ತಹಶೀಲ್ದಾರ್ ವರ್ಗಾವಣೆ ಸರಿಯಲ್ಲ. ಇದು ಆಡಳಿತದ ವೈಫಲ್ಯ. ಇದರಿಂದ ತಾಲ್ಲೂಕಿನ ಜನರಿಗೆ ನೋವಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಪ್ರತಿಭಟನೆ ವೇಳೆ ಸಂಸದ ಪ್ರತಾಪ್ ಸಿಂಹ ವಿರುದ್ದವೂ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ತಮ್ಮದಲ್ಲದ ಕ್ಷೇತ್ರಕ್ಕೆ ಬಂದು ರಾಜಕೀಯ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಅಲ್ಲದೆ ತಹಶೀಲ್ದಾರ್ ಮೋಹನ್ ಕುಮಾರಿ ವರ್ಗಾವಣೆ ಹಿಂಪಡೆಯುವಂತೆ ಒತ್ತಾಯಿಸಿದರು.

Key words: Nanjangud -Tehsildar – protests- demanding -withdrawal -transfer.