ಮುಂಬೈ ಮಳೆಗೆ ಗೋಡೆ ಕುಸಿತ ದುರಂತ: ನೆರವು ಘೋಷಿಸಿ ಸಂತಾಪ ಸೂಚಿಸಿದ ಮೋದಿ

ಬೆಂಗಳೂರು, ಜುಲೈ 18, 2021 (www.justkannada.in): ಮುಂಬೈನ ಚೆಂಬೂರ್ ಹಾಗೂ ವಿಕ್ರೋಲಿಯದಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪರಿಹಾರವನ್ನೂ ಘೋಷಿಸಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕಂಬನಿ ಮಿಡಿದಿದ್ದಾರೆ. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲು ಪ್ರಾರ್ಥಿಸಿದ್ದಾರೆ.

ಚೆಂಬೂರ್ ಹಾಗೂ ವಿಕ್ರೋಲಿಯ ದುರಂತಗಳಲ್ಲಿ ಇದುವರೆಗೆ 15 ಮಂದಿ ಮೃತಪಟ್ಟಿದ್ದಾರೆ. ಮುಂಬೈಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಅನೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.