Friday, September 18, 2026

BDA Apartments

18ನೇ ಲೋಕಸಭೆ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ: ಜೂ.9 ರಂದು ಪ್ರಧಾನಿ ಆಗಿ ಪ್ರಮಾಣ...
Home Front Page  18ನೇ ಲೋಕಸಭೆ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ: ಜೂ.9 ರಂದು ಪ್ರಧಾನಿ ಆಗಿ ಪ್ರಮಾಣ ವಚನ...

 18ನೇ ಲೋಕಸಭೆ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ: ಜೂ.9 ರಂದು ಪ್ರಧಾನಿ ಆಗಿ ಪ್ರಮಾಣ ವಚನ ಸಾಧ್ಯತೆ.

ನವದೆಹಲಿ,ಜೂನ್,7,2024 (www.justkannada.in): 18ನೇ ಲೋಕಸಭೆ ನಾಯಕರಾಗಿ ನರೇಂದ್ರ ಮೋದಿ ಅವರನ್ನ ಎನ್ ಡಿಎ ಸಂಸದರು ಆಯ್ಕೆಯಾಗಿದ್ದಾರೆ.

ಈ ಮೊದಲು ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎನ್‌ಡಿಎ ನಾಯಕರು ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಿದ್ದರು. ಇಂದು ಹಳೆ ಸಂಸತ್ ಭವನದಲ್ಲಿ ಸಭೆ ನಡೆಯಿತು. ಸಭೆಯಲ್ಲಿ  ಅಧಿಕೃತವಾಗಿ ಎನ್​ಡಿಎಯ ಎಲ್ಲಾ ಸಂಸದರು ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ.18ನೇ ಲೋಕಸಭೆ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ modi modi 1

ಇನ್ನೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಮನವಿ ಮಾಡಲಿದ್ದಾರೆ ಅದಾದ ಬಳಿಕ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಲು ಒಪ್ಪಿಗೆ ನೀಡಲಿದ್ದಾರೆ.

ಜೂನ್ 9 ರಂದು ಸಂಜೆ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ  ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

Key words: Narendra Modi, elected, 18th Lok Sabha, leader