ಭಾಷೆಗಳನ್ನು ನಾಶ ಮಾಡಿ ಒಂದು ರಾಷ್ಟ್ರ ಕಟ್ಟೋಕೆ ಹೇಗೆ ಸಾಧ್ಯ?  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ.

ಬೆಂಗಳೂರು,ಅಕ್ಟೋಬರ್,15,2022(www.justkannada.in):  ದೇಶದಲ್ಲಿ ಕೇಂದ್ರದ ಗೃಹ ಸಚಿವರು ಹಲವಾರು ಭಾಷೆಗಳ ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ. ಹೀಗಾಗಿ ಈ ಬಗ್ಗೆ ಈಗಾಗಲೇ ತಮಿಳುನಾಡಿನ ಸಿಎಂ ಪ್ರತಿಭಟನೆ ಮಾಡಿದ್ದಾರೆ. ಪಶ್ಚಿಮ ಬಂಗಾಳ, ಕೇರಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಭಾಷೆಗಳನ್ನು ನಾಶ ಮಾಡಿ ಒಂದು ರಾಷ್ಟ್ರ ಕಟ್ಟೋಕೆ ಹೇಗೆ ಸಾಧ್ಯ? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ, ಇನ್ನೊಂದು ಕಡೆ ಭಾಷೆಯ ದಬ್ಬಾಳಿಕೆ ಪ್ರಾರಂಭ ಆಗಿದೆ. ಒಂದು ರಾಷ್ಟ್ರ ಮಾಡಬೇಕು ಎಂದು ಬಿಜೆಪಿ ಹೇಳ್ತಿದ್ದಾರೆ. ಭಾಷೆಗಳನ್ನು ನಾಶ ಮಾಡಿ ಒಂದು ರಾಷ್ಟ್ರ ಕಟ್ಟೋಕೆ ಹೇಗೆ ಸಾಧ್ಯ? ಕೇಂದ್ರದ ಧೋರಣೆ ಸಂಪೂರ್ಣವಾಗಿ ಸ್ಥಗಿತಗೊಳಿಸಿ. ದೇಶದಲ್ಲಿ ಇರುವ ಸಮಸ್ಯೆ ಬಗೆಹರಿಸಿ ಎಂದು ಕಿಡಿಕಾರಿದರು.

ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳು  ದೇಶಕ್ಕೆ ಮಾರಕ. ಒಂದೇ ನಾಣ್ಯದ ಎರಡೂ ಮುಖ. ದಕ್ಷಿಣ ಭಾರತದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಬಾಗಿಲು ಹಾಕಿದ್ದಾರೆ. ಕರ್ನಾಟಕದಲ್ಲೂ ಅದು ಬಹಳ ದೂರ ಇಲ್ಲ. 18 ಹಾಗೂ 19ರಂದು ಶಾಸಕರ ಹಾಗೂ ಸದಸ್ಯರ ಸಭೆ ಕರೆದಿದ್ದೇವೆ. ನವಂಬರ್ 1ರಂದು ವಿಶೇಷವಾಗಿ ಕನ್ನಡ ಬಾವುಟವನ್ನು ಮನೆ ಮನೆಗೆ ಹಾರಿಸಲಾಗುವುದು ಎಂದು ಹೆಚ್.ಡಿಕೆ ಹೇಳಿದರು.

Key words: nation – destroying- languages- Former CM -H.D. Kumaraswamy