ಮೈಸೂರಿನ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ

ಮೈಸೂರು, ಜನವರಿ 23, 2022 (www.justkannada.in): ಮೈಸೂರಿನ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ‘ಸುಸ್ಥಿರ ಅಭಿವೃದ್ಧಿ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ’ ಕುರಿತು ರಾಷ್ಟ್ರೀಯ ಸಮ್ಮೇಳನ ನಡೆಯಿತು.

ಇಂಡಿಯನ್ ಸೈನ್ಸ್ ಕಾಂಗ್ರೆಸ್ ಬೆಂಗಳೂರು ಚಾಪ್ಟರ್ ವತಿಯಿಂದ ಆಯೋಜಿಸಿದ್ದ ಸಮ್ಮೇಳನವನ್ನು ಐಎಸ್ ಸಿಎ ಜನರಲ್ ಅಧ್ಯಕ್ಷೆ, ಡಿಬಿಟಿಯ ಬಯೋಇನ್ಫರ್ಮ್ಯಾಟಿಕ್ಸ್ ಮೂಲಸೌಕರ್ಯ ಸೌಲಭ್ಯ ಕೇಂದ್ರದ ಸಂಯೋಜಕರಾದ ಡಾ.ವಿಜಯಲಕ್ಷ್ಮಿ ಸಕ್ಸೇನಾ ಉದ್ಘಾಟಿಸಿದರು.

ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು , ಮುಕ್ತ ಮೈಸೂರು ವಿವಿ ಕುಲಪತಿ ಪ್ರೊ.ಎಚ್.ರಾಜಶೇಖರ್ ಅಧ್ಯಕ್ಷತೆ ವಹಿಸಿದ್ದರು. ವಿವಿ ಕುಲಪತಿ ಡಾ.ಶರಣಪ್ಪ ವಿ. ಹಲ್ಸೆ, ಡಾ.ಅಶೋಕ್ ಕುಮಾರ್ ಸಕ್ಸೇನಾ, ಡಾ.ಎಂ.ಪುಟ್ಟಸ್ವಾಮಿ, ಶೀಯೋ ಸತ್ಯ ಪ್ರಕಾಶ್, ಡಾ.ಗಂಗಾಧರ್, ಕುಬೇರ್ ಪಿ. ಗೌಡ, ಪ್ರೊ.ಎಸ್.ಶ್ರೀಕಂಠಸ್ವಾಮಿ  ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ನಾಳೆ (ಜ.24) ಸಮಾರೋಪ: ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಜ.24ರಂದು ಮಧ್ಯಾಹ್ನ 2ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.  ವಿಶ್ರಾಂತ ಕುಲಪತಿ ಪ್ರೊ.ಎಸ್.ಎನ್.ಹೆಗ್ಡೆ, ಮೈಸೂರು ವಿವಿ ರಿಜಿಸ್ಟ್ರಾರ್ ವಿ.ಆರ್.ಶೈಲಜಾ, ಡಾ.ಎಸ್.ರಾಮಕೃಷ್ಣ, ಎಸ್.ಪ್ರಭಾ ಇತರರು ಪಾಲ್ಗೊಳ್ಳಲಿದ್ದಾರೆ.