Friday, August 7, 2026

BDA Apartments

Home Front Page ಜನರ ಸಮಸ್ಯೆ ಬಗ್ಗೆ ಚರ್ಚಿಸಲು ರಾಷ್ಟ್ರೀಯ ಪಕ್ಷಗಳಿಗೆ ಸಮಯ ಇಲ್ಲ-ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ…

ಜನರ ಸಮಸ್ಯೆ ಬಗ್ಗೆ ಚರ್ಚಿಸಲು ರಾಷ್ಟ್ರೀಯ ಪಕ್ಷಗಳಿಗೆ ಸಮಯ ಇಲ್ಲ-ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ…

ಕಲಬುರಗಿ,ಮಾರ್ಚ್,25,2021(www.justkannada.in): ಜನರ ಸಮಸ್ಯೆ ಬಗ್ಗೆ ಚರ್ಚಿಸಲು ರಾಷ್ಟ್ರೀಯ ಪಕ್ಷಗಳಿಗೆ ಸಮಯ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.jk

ಸದನದಲ್ಲಿ ರಮೇಶ್ ಜಾರಕಿಹೊಳಿ ಸಿಡಿ ವಿಚಾರ ಚರ್ಚಿಸಿದ ಹಿನ್ನೆಲೆ ಈ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ವಿರುದ್ದ ಹರಿಹಾಯ್ದಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಜನರ ಸಮಸ್ಯೆ ಬಗ್ಗೆ ಚರ್ಚಿಸುವ ಆಸಕ್ತಿ ಇಲ್ಲ.  ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕುತಂತ್ರದಿಂದ ಬಂದಿದೆ. ಬಿಜೆಪಿ ಸರ್ಕಾರಕ್ಕೆ ಅಧಿಕಾರ ನಡೆಸಲು ಬರಲ್ಲ  ವಾಗ್ದಾಳಿ ನಡೆಸಿದರು.National parties –no time -discuss -issue – people-problem- Former cm- hd kumaraswamy

 ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ವತಂತ್ರವಾಗಿ ಅಧಿಕಾರ ನಡೆಸಲು ಕೇಂದ್ರದವರು ಬಿಟ್ಟಿಲ್ಲ. ಹೀಗಾಗಿ ಬಿಜೆಪಿಯವರಿಗೆ ರಾಜ್ಯದಲ್ಲಿ ಅಧಿಕಾರ ನಡೆಸಲು ಬರಲ್ಲ. ಕೇಂದ್ರದಿಂದ ಪ್ರಜಾಪ್ರಭುತ್ವವನ್ನು ಹಂತ ಹಂತವಾಗಿ ನಾಶ ಮಾಡುತ್ತಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ಹರಿಹಾಯ್ದರು.

Key words: National parties –no time -discuss -issue – people-problem- Former cm- hd kumaraswamy