Saturday, August 15, 2026

BDA Apartments

Home Front Page ಜುಲೈನಲ್ಲಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಆಯೋಜನೆ

ಜುಲೈನಲ್ಲಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಆಯೋಜನೆ

ಮೈಸೂರು, ಜೂನ್ 11, 2019 (www.justkannada.in): ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನಗರದಲ್ಲಿ ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಿದೆ.

ಜುಲೈ 17 ಹಾಗೂ 18ರಂದು ಎರಡು ದಿನ ವಿಚಾರ ಸಂಕಿರಣ ನಡೆಯಲಿದೆ. ಭಾರತದಲ್ಲಿ ಬುಡಕಟ್ಟು ಸಮುದಾಯಗಳ ಅಭಿವೃದ್ಧಿ: ಸವಾಲುಗಳು ಹಾಗೂ ಸಮಸ್ಯೆಗಳು ವಿಷಯ ಕುರಿತು ಎರಡು ದಿನ ಚರ್ಚೆ, ವಿಚಾರಗೋಷ್ಠಿ ಸಂಪನ್ಮೂಲ ವ್ಯಕ್ತಿಗಳಿಂದ ವಿಚಾರ ಮಂಡನೆ ನಡೆಯಲಿದೆ.

ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲು ಬಯಸುವವರು ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಸಂಪರ್ಕಿಸಬಹುದು ಎಂದು ನಿರ್ದೇಶಕ ಪ್ರೊ.ಟಿ.ಟಿ.ಬಸವನಗೌಡ ಅವರು ತಿಳಿಸಿದ್ದಾರೆ. ಮಾಹಿತಿಗೆ: 0821-2560275 ಸಂಪರ್ಕಿಸಬಹುದು.