Sunday, September 20, 2026

BDA Apartments

ರಾಷ್ಟ್ರೀಯ ಯುವಜನೋತ್ಸವದ ಲೋಗೋ, ಮಸ್ಕಟ್ ಬಿಡುಗಡೆ BDA JK_Adv BDA Adv
Home Front Page ರಾಷ್ಟ್ರೀಯ ಯುವಜನೋತ್ಸವದ ಲೋಗೋ, ಮಸ್ಕಟ್ ಬಿಡುಗಡೆ.

ರಾಷ್ಟ್ರೀಯ ಯುವಜನೋತ್ಸವದ ಲೋಗೋ, ಮಸ್ಕಟ್ ಬಿಡುಗಡೆ.

ಬೆಂಗಳೂರು ,ಜನವರಿ,7,2023(www.justkannada.in):  ರಾಷ್ಟ್ರೀಯ ಯುವ ಜನೋತ್ಸವದ ಲೋಗೋ, ಮಸ್ಕಟ್‌ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು.‌

ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಲೋಗೋ, ಮಸ್ಕಟ್‌ ಅನ್ನು ಬಿಡುಗಡೆಗೊಳಿಸಲಾಯಿತು.  ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ವರ್ಚುವಲ್ ಮೂಲಕ ಭಾಗಿಯಾಗಿದ್ದರು.

ಲೋಗೋ ಬಿಡುಗಡೆ ಬಳಿಕ ಅನುರಾಗ್ ಸಿಂಗ್ ಠಾಕೂರ್ ನೇತೃತ್ವದಲ್ಲಿ ಸ್ಟೀರಿಂಗ್ ಕಮಿಟಿ ಸಭೆ ನಡೆಸಲಾಯಿತು. ರಾಷ್ಟ್ರೀಯ ಯುವ ಜನೋತ್ಸವ ಯಶಸ್ವಿಗೊಳಿಸುವ ಸಂಬಂಧಿಸಿದಂತೆ ಉದ್ಘಾಟನೆ, ಸಿದ್ದತೆ ಸೇರಿದಂತೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.ರಾಷ್ಟ್ರೀಯ ಯುವಜನೋತ್ಸವದ ಲೋಗೋ yuvajanotsava

ಜನವರಿ 12-16 ರವರೆಗೂ ಹುಬ್ಬಳ್ಳಿ ಧಾರವಾಡದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.

Key words: National-Youth- Day –Logo-Muscat- release-CM-Basavaraj bommai