ಆಡಳಿತ ಪಕ್ಷ ಅಂದ ಮೇಲೆ ಅಸಮಾಧಾನ ಸಹಜ- ಸಚಿವ ಸತೀಶ್ ಜಾರಕಿಹೊಳಿ.

ಬೆಂಗಳೂರು, ಮೇ 14,2024 (www.justkannada.in):  ಕರ್ನಾಟಕದಲ್ಲಿ ಅಪರೇಷನ್ ಕಮಲ ಕುರಿತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ  ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಇಲಾಖೆ ಸಚಿವ ಜಾರಕಿಹೊಳಿ,  ಸುಮ್ಮನೆ ಸರ್ಕಾರ ಬಿಳುತ್ತೆ‌ಅಂತಾರೆ. ಶಾಸಕರ ಅಸಮಧಾನ ಇದ್ದೆ ಇರುತ್ತೆ. ಆಡಳಿತ ಪಕ್ಷ ಅಂದ ಮೇಲೆ ಅಸಮಧಾನ ಸಹಜ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಪರಮೇಶ್ವರ್ ಭೇಟಿ ವಿಶೇಷತೆ ಏನು ಇಲ್ಲ. ಚುನಾವಣೆ ವಿಚಾರವಾಗಿ ಮಾತುಕತೆ ಮಾಡಿದ್ದೇವೆ. ಎಷ್ಟು ಸೀಟ್ ಗೆಲ್ಲುತ್ತೇವೆ ಎಂಬ ಚರ್ಚೆ ಮಾಡಿದ್ದೇವೆ ಎಂದರು.

ಡಿಸಿಎಂ ಬಗ್ಗೆ ಚುನಾವಣೆ ವೇಳೆ ಕೂಗು ಇತ್ತು. ಈಗ ಚುನಾವಣೆ ಮುಗಿದಿದೆ. ಚುನಾವಣೆಗೆ ಅನುಕೂಲ ಆಗಲಿ ಅಂತ ಕೂಗು ‌ಇತ್ತು. ಈಗ ಡಿಸಿಎಂ ಕೂಗು ಇಲ್ಲ. ಸರ್ಕಾರ ಬಿಳಿಸಲು ಸುಮ್ಮನೆ ಹೇಳುತ್ತಾರೆ. ಸರ್ಕಾರ ಏನು ಬಿದ್ದು ಹೋಯ್ತಾ. ಸುಮ್ಮನೆ ಸರ್ಕಾರ ಬಿಳುತ್ತೆ‌ಅಂತಾರೆ. ಶಾಸಕರ ಅಸಮಧಾನ ಇದ್ದೆ ಇರುತ್ತೆ. ಆಡಳಿತ ಪಕ್ಷ ಅಂದ ಮೇಲೆ ಅಸಮಧಾನ ಸಹಜ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

Key words:  natural, ruling party, Sathish Jarakiholi