ನಾವಿಕ ವಿಶ್ವ ಕನ್ನಡ ಸಮಾವೇಶಕ್ಕೆ ಬಸವರಾಜ್ ಬೊಮ್ಮಾಯಿ ಚಾಲನೆ

ಬೆಂಗಳೂರು. ಆಗಸ್ಟ್ 28, 2021 (www.justkannada.in): 6ನೇ ನಾವಿಕ ವಿಶ್ವ ಕನ್ನಡ ಸಮಾವೇಶಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆನ್ಲೈನ್ ಮೂಲಕ ಚಾಲನೆ ನೀಡಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್​.ಅಶ್ವತ್ಥನಾರಾಯಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್​ಕುಮಾರ್ ಅತಿಥಿ ಭಾಷಣ ಮಾಡಿದರು. ಈ ಸಮ್ಮೇಳನದ ಸ್ಮರಣ ಸಂಚಿಕೆ ‘ಭಾವಧಾರೆ’ಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಬಿಡುಗಡೆ ಮಾಡಿದರು.

ಅನಿವಾಸಿ ಕನ್ನಡಿಗರು ವಿದೇಶಗಳಲ್ಲಿ ನೆಲೆಸಿದ್ದರೂ ಕನ್ನಡ ನಾಡು-ನುಡಿ, ಸಾಹಿತ್ಯ, ಸಂಸ್ಕೃತಿ, ಸಾಂಸ್ಕೃತಿಕ ಪರಂಪರೆಯ ಹಿರಿಮೆಯನ್ನು ತಮ್ಮ ಮುಂದಿನ ಪೀಳಿಗೆಗೂ ಮುಂದುವರಿಸಿಕೊಂಡು ಹೋಗುತ್ತಿರುವ ಪ್ರಯತ್ನ ಶ್ಲಾಘನೀಯ ಎಂದು ಸಿಎಂ ಇದೇ ವೇಳೆ ಶ್ಲಾಘಿಸಿದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಭರಪೂರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.