ಪಂಜಾಬ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ದಿಢೀರ್ ರಾಜೀನಾಮೆ.

ಚಂಡೀಗಢ,ಸೆಪ್ಟಂಬರ್,28,2021(www.justkannada.in):  ಪಂಜಾಬ್ ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಹೌದು, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ದಿಢೀರ್ ರಾಜಿನಾಮೆ ಕೊಟ್ಟಿದ್ದಾರೆ.

ನವಜೋತ್ ಸಿಂಗ್ ಸಿಧು  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದು, ಪಕ್ಷದ ಸೇವೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.  ರಾಜಿಯಿಂದಲೇ ಮನುಷ್ಯನ ಪಾತ್ರದ ಕುಸಿತವಾಗುತ್ತದೆ. ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ ಎಂದು ಸಿಧು ಪತ್ರದಲ್ಲಿ ಬರೆದಿದ್ದಾರೆ.

ಆದ್ದರಿಂದ, ನಾನು ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಕಾಂಗ್ರೆಸ್ ಸೇವೆ ಮುಂದುವರಿಸುತ್ತೇನೆ ಎಂದು  ಸಿಧು ತಿಳಿಸಿದ್ದಾರೆ. ಕಳೆದ ಜುಲೈನಲ್ಲಿ ಸಿಧು ಕಾಂಗ್ರೆಸ್ ಪಕ್ಷದ  ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

Key words: Navjot Singh Sidhu- resigned- – President of the Punjab Congress