Friday, October 16, 2026

Dasara Wishes

Happy Dasara
Home Front Page  ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಬಿಡುಗಡೆ

 ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಬಿಡುಗಡೆ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಉಪಚುನಾವಣೆ ವೇಳೆ ದಾವಣಗೆರೆಯಲ್ಲಿ ಕಾಂಗ್ರೆಸ್ ನಲ್ಲಿ ಅಸಮಾಧಾನ ವಿಚಾರ ಸಂಬಂಧ ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಅವರನ್ನು ಬಿಡುಗಡೆ ಮಾಡಿ ಆದೇಶಿಸಲಾಗಿದೆ.

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಗೆ ಕೋಕ್ ನೀಡಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನೀಡಿದ್ದ ಸೂಚನೆ ಬೆನ್ನಲ್ಲೆ ಇದೀಗ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.

ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನಜೀರ್ ಅಹ್ಮದ್ ಅವರಿಗೆ ರಾಜೀನಾಮೆ ನೀಡುವಂತೆ ಅಂತಿಮ ಗಡುವು ನೀಡಿದ್ದರು. ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡದಿದ್ದರೆ, ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

Key words: Nazir Ahmed, relieved, post, CM’s political secretary