ರಾಜ್ಯದಲ್ಲಿ ಲಾಕ್​ ಡೌನ್ ಮುಂದುವರಿಯುವ ಅವಶ್ಯಕತೆ ಇದೆ- ಸಚಿವ ಆರ್.ಅಶೋಕ್…

ಬೆಂಗಳೂರು,ಮೇ,14,2021(www.justkannada.in):  ರಾಜ್ಯದಲ್ಲಿ ಕೊರೋನಾ 2ನೇ ಅಲೆ ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಮೇ 24ರವರೆಗೆ ಲಾಕ್​ ಡೌನ್​ ಜಾರಿಗೊಳಿಸಿದೆ.  ಲಾಕ್​ಡೌನ್​ ಬಳಿಕ ರಾಜ್ಯದಲ್ಲಿ ಸೋಂಕಿನ ಸಂಖ್ಯೆ ಇಳಿಮುಖವಾಗಿದ್ದು, ಈ ಮಧ್ಯೆ ರಾಜ್ಯದಲ್ಲಿ ಲಾಕ್ ಡೌನ್ ಮುಂದುವರೆಯುವ ಅವಶ್ಯಕತೆ ಇದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.jk

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್,  ನಾನು ಕೂಡ ಒಬ್ಬ ಬೆಂಗಳೂರಿನ ನಾಗರಿಕನಾಗಿ ಲಾಕ್​ಡೌನ್​ ಮುಂದುವರಿಯಲಿ ಎಂದೇ ಬಯಸುತ್ತೇನೆ. ಪ್ರಸ್ತುತ ಸನ್ನಿವೇಶದಲ್ಲಿ ರಾಜ್ಯದಲ್ಲಿ ಲಾಕ್ ​ಡೌನ್ ಮುಂದುವರಿಯುವ ಅವಶ್ಯಕತೆ ಇದೆ. ಹೀಗಾಗಿ ನಾನು ಸಿಎಂಗೆ ಲಾಕ್ ​​ಡೌನ್ ಮುಂದುವರಿಸುವ ಬಗ್ಗೆಯೇ ಸಲಹೆಯನ್ನ ನೀಡುವೆ ಎಂದಿದ್ದಾರೆ.need-continue-lockdown-state-minister-r-ashok

ಮಹಾರಾಷ್ಟ್ರದಲ್ಲಿ 47 ದಿನಗಳ ಕಾಲ ಲಾಕ್​ಡೌನ್​ ಮಾಡಲಾಗಿತ್ತು. ದೆಹಲಿಯಲ್ಲಿ ಈಗಲೂ ಸಹ ಲಾಕ್​ ಡೌನ್​ ಆದೇಶ ಜಾರಿಯಲ್ಲಿದೆ. ರಾಜ್ಯದಲ್ಲೂ ಸೆಮಿ ಲಾಕ್​ಡೌನ್​ ಹಾಗೂ ಲಾಕ್​ಡೌನ್​ ಆದೇಶದ ಬಳಿಕ ಸೋಂಕಿನ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ಲಾಕ್​ಡೌನ್​ ಆದೇಶವನ್ನ ಮೊದಲು ವಿಪಕ್ಷಗಳು ಗೇಲಿ ಮಾಡಿದ್ದವು. ಆದರೆ ರಾಜ್ಯದಲ್ಲಿ ಸೋಂಕಿನ ಸಂಖ್ಯೆ ಇಳಿಮುಖವಾಗುವಲ್ಲಿ ಲಾಕ್ ​ಡೌನ್​ ಪ್ರಮುಖ ಪಾತ್ರ ವಹಿಸಿದೆ ಎಂದು ಸಚಿವ ಆರ್.ಅಶೋಕ್ ಹೇಳಿದರು.

Key words: need – continue – lockdown – state-Minister- R. Ashok.