ಚಿನ್ನದ ಪದಕ ಗೆದ್ದು ಸಾಧನೆಗೈದ ನೀರಜ್ ಚೋಪ್ರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಅಭಿನಂದನೆ.

ನವದೆಹಲಿ,ಆಗಸ್ಟ್,28,2023(www.justkannada.in): ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್  ಚೋಪ್ರಾ ಅವರು ಹಂಗೇರಿಯಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ನಲ್ಲಿ ಜಾವೆಲಿನ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.

ಬುಡಾಪೆಸ್ಟ್‌ನಲ್ಲಿ ನಡೆದ ಫೈನಲ್‌ ನಲ್ಲಿ ನೀರಜ್ ಚೋಪ್ರಾ 88.17 ಮೀಟರ್ ದೂರ ಎಸೆದು ಪಾಕಿಸ್ತಾನದ ಅರ್ಷದ್ ನದೀಮ್ ಸೇರಿದಂತೆ 11 ಅಥ್ಲೀಟ್‌ ಗಳನ್ನು ಹಿಂದಿಕ್ಕಿ ಚಿನ್ನ ಗೆದ್ದರು. ಇದರೊಂದಿಗೆ ವಿಶ್ವ ಚಾಂಪಿಯನ್‌ ಶಿಪ್ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಚಿನ್ನಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾರಿಗೆ ​ರಾಷ್ಟ್ರಪತಿ ದ್ರೌಪದಿ ಮುರ್ಮು,  ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ದೇಶದ ಇತಿಹಾಸಕ್ಕೆ ಸುವರ್ಣ ಪುಟ ಸೇರ್ಪಡೆಯಾಗಿದೆ.  ನೀರಜ್ ಸಾಧನೆ  ಲಕ್ಷಾಂತರ ಯುವಕರಿಗೆ ಸ್ಪೂರ್ತಿಯಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಪ್ರತಿಭಾವಂತ ನೀರಜ್ ಚೋಪ್ರಾ ಅವರು ಶ್ರೇಷ್ಠತೆಯನ್ನು ಉದಾಹರಿಸುತ್ತಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಅಥ್ಲೆಟಿಕ್ಸ್‌ನಲ್ಲಿ ಕೇವಲ ಚಾಂಪಿಯನ್ ಆಗಿರದೆ ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿರಿಸಿದೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

Key words: Neeraj Chopra – achievement – gold medal- President – PM-congratulated