ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ- ಪ್ರಧಾನಿ ಮೋದಿ

ನವದೆಹಲಿ,ಜುಲೈ,23,2026 (www.justkannada.in):  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ  ಖಂಡಿಸಿ ಸಿಜೆಪಿಯಿಂದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿಚಾರ್ಜ್ ಖಂಡಿಸಿ ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ಕೊಡಿಸುವಂತೆ ಆಗ್ರಹಿಸಿ  ವಿಪಕ್ಷಗಳು ಬೃಹತ್ ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಈ ಕುರಿತು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಮುರಿದಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ನಮ್ಮ ಯುವಜನರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಬೇರೆ ಯಾವುದೂ ಮುಖ್ಯವಲ್ಲ! ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆಯನ್ನು ಖಚಿತಪಡಿಸಲು ನಾವು ಫಾಸ್ಟ್ ಟ್ರ್ಯಾಕ್ (ತ್ವರಿತ) ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ತೆಗೆದುಕೊಳ್ಳುತ್ತಿರುವ ಸರಣಿ ಕ್ರಮಗಳು ಹೀಗೆಯೇ ಮುಂದುವರಿಯುತ್ತವೆ. ನಮ್ಮ ಯುವಜನರ ಭವಿಷ್ಯಕ್ಕೆ ಹಾನಿ ಮಾಡಲು ಯತ್ನಿಸುವ ಯಾರನ್ನೇ ಆಗಲಿ ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.

Key words: NEET, question paper, leak, PM, Modi