ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ: ಕೇಂದ್ರ ಶಿಕ್ಷಣ ಸಚಿವರೇ ಕೂಡಲೇ ರಾಜೀನಾಮೆ ನೀಡಿ- ಪ್ರಿಯಾಂಕಾ ಗಾಂಧಿ

ನವದೆಹಲಿ,21,2026 (www.justkannada.in):  ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಕೂಡಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಆಗ್ರಹಿಸಿದರು.

ನೀಟ್ ಅಕ್ರಮ ವಿರೋಧಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಂಸದೆ ಪ್ರಿಯಾಂಕಾ ಗಾಂಧಿ, ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುತ್ತಿದೆ.  ಸರ್ಕಾರ ವಿದ್ಯಾರ್ಥಿಗಳ ಜೊತೆಗೆಮಾತುಕತೆಗೆ ಮುಂದಾಗುತ್ತಿಲ್ಲ. ಈ ಸರ್ಕಾರ ರೈತರು ಹಾಗೂ ಯುವಕರ ವಿರೋಧಿ ಸರ್ಕಾರ. ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ.  ಕೂಡಲೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರಶ್ನೆ ಪತ್ರಿಕೆ ಸೋರಕೆ ಇದೊಂದು ಗಂಭೀರ ಸಮಸ್ಯೆ. ಪದೇ ಪದೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದೆ  ದೇಶದ ಯುವಕರು ತಮ್ಮ ಭವಿಷ್ಯದ ಬಗ್ಗೆ ಚಿಂತೆಗೀಡಾಗಿದ್ದಾರೆ. ಸರ್ಕಾರ ಪ್ರತಿಭಟನಾಕಾರರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದರು.

Key words: NEET, students, Protest, future, Priyanka Gandhi