ನವದೆಹಲಿ,ಮೇ,12,2026 (www.justkannada.in): ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ಮೇ 3ರಂದು ನಡೆದಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (NEET-UG) ಕೇಂದ್ರ ಸರ್ಕಾರ ರದ್ದುಗೊಳಿಸಿದೆ.
ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನೀಟ್ ಯುಜಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಅಲ್ಲದೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶಿಸಲಾಗಿದೆ.
ಮೇ 3 ರಂದು ದೇಶದಲ್ಲಿ ನಡೆದಿದ್ದ ನೀಟ್ ಯುಜಿ ಪರೀಕ್ಷೆಯಲ್ಲಿ ಕೈ ಬರಹದಲ್ಲಿದ್ದ140 ಪ್ರಶ್ನೆಗಳು ಲೀಕ್ ಆಗಿತ್ತು ಎನ್ನಲಾಗಿದೆ. ಪರೀಕ್ಷೆ ರದ್ದುಗೊಂಡಿದ್ದು ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊಸ ದಿನಾಂಕ ನಿಗದಿ ಮಾಡಲಿದೆ.
Key words: Central government, cancels, ‘NEET UG’ exam







