ವೈಯಕ್ತಿಕ ಕಾರಣಕ್ಕೆ ಕೊಲೆ ಅನ್ನೋದು ತಪ್ಪು: ಸಂಸದೆ ಸುಮಲತಾ ಅಂಬರೀಶ್.

ಮೈಸೂರು,ಏಪ್ರಿಲ್,20,2024 (www.justkannada.in):  ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಸಂಬಂಧ ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿದೆ ಅನ್ನೋದು ತಪ್ಪು. ತಕ್ಷಣ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಸದೆ ಸುಮಲತಾ ಅಂಬರೀಶ್ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣ ಸಂಬಂಧ ಮೈಸೂರಿನಲ್ಲಿ ಮಾತನಾಡಿದ ಸುಮಲತಾ ಅಂಬರೀಶ್, ನಾನು ಈ ವಿಚಾರವನ್ನ ಗಮನಿಸಿದ್ದೇನೆ. ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಫೋಟೋಗಳು ಹರಿದಾಡುತ್ತಿವೆ. ಈಗಾಗಲೇ ಆಕೆಯ ಹತ್ಯೆಯಾಗಿದೆ, ಆ ಜೀವ ನೊಂದಿದೆ. ಇಂತಹ ವೇಳೆ ಆಕೆಯ ಕ್ಯಾರೆಕ್ಟರ್ ಬಗ್ಗೆ ಮಾತನಾಡೋದು ಬಹಳ ನೋವಿನ ವಿಚಾರ ಎಂದು ಬೇಸರ ವ್ಯಕ್ತಪಡಿಸಿದರು.

ಯಾರೊ ಒಬ್ಬರು ಮಾಡಿದ ತಪ್ಪಿಗೆ ಸಮುದಾಯವನ್ನೇ ತಪ್ಪು ಅನ್ನೋದು ಸರಿಯಲ್ಲ. ಆದರೆ ಒಂದು ಸಮುದಾಯವನ್ನ ಸಮರ್ಥನೆ ಮಾಡಿಕೊಳ್ಳುವುದು ತಪ್ಪು. ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದ ಎಫ್ಎಸ್ಎಲ್ ವರದಿ ಬರುವ ಮುನ್ನವೇ ಸಮರ್ಥನೆ ಮಾಡಿಕೊಂಡ್ರಿ. ಈಗ ಇದು ವೈಯಕ್ತಿಕ ಕಾರಣಕ್ಕೆ ಆಗಿರೋ ಕೊಲೆ ಅನ್ನೋದು ತಪ್ಪು. ತಕ್ಷಣ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಸಂಬಂಧ  ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.

Key words: Neha, murder, case, Sumalatha Ambarish