ನೇಹಾ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ವಹಿಸಿ- ಬಿವೈ ವಿಜಯೇಂದ್ರ ಆಗ್ರಹ.

ಬೆಂಗಳೂರು,ಏಪ್ರಿಲ್,22,2024 (www.justkannada.in): ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ,  ನೇಹಾ ಹತ್ಯೆಯಿಂದ ಸರ್ಕಾರಕ್ಕೆ ನಾಚಿಕೆಯಾಗಬೇಕು. ಈ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ.  ನೇಹಾ ಕುಟುಂಬದ ತೇಜೋವಧೆ ಮಾಡಲಾಗುತ್ತಿದೆ. ಕಾಂಗ್ರೆಸ್ ನಿಂದ ಅಲ್ಪಸಂಖ್ಯಾತರ ತುಷ್ಟಿಕರಣವಾಗುತ್ತಿದೆ .

ಕೊಲಗಡುಕರನ್ನ ಸರ್ಕಾರ ರಕ್ಷಣೆ ಮಾಡುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

Key words: Neha, murder, CBI , BY Vijayendra