ಸರಕಾರದಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಸ್ಮರಣೆ: ಪರಾಕ್ರಮ ದಿನಾಚರಣೆ

ಬೆಂಗಳೂರು, ಜನವರಿ 23, 2022 (www.justkannada.in): ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನೋತ್ಸವ ಹಾಗೂ ಪರಾಕ್ರಮ ದಿನದ ಪ್ರಯುಕ್ತ ವಿಧಾನಸೌಧ ಆವರಣದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಸಿಎಂ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ನೇತಾಜಿ ಸುಭಾಷ್ ಚಂದ್ರಬೋಸ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಸೈನ್ಯವನ್ನು ಕಟ್ಟಿದ ಅಪ್ರತಿಮ ನಾಯಕ ಎಂದು ಸ್ಮರಿಸಿದರು.

ಭಾರತಕ್ಕೆ ಇಂದು ಹೆಮ್ಮೆಯ ದಿನ, ನೇತಾಜಿ ಬ್ರಿಟಿಷರ ವಿರುದ್ಧ ಸೈನ್ಯವನ್ನು ಕಟ್ಟಿದ ಅಪ್ರತಿಮ ನಾಯಕ ಸ್ವಾತಂತ್ರ್ಯ ಹೋರಾಟದಲ್ಲಿ ನೇತಾಜಿ ಪಾತ್ರ ದೊಡ್ಡದು. ಅವರ ಆದರ್ಶವನ್ನು ಎಲ್ಲರೂ ಪಾಲಿಸಬೇಕಿದೆ ಎಂದರು.

key words: Netaji Subhash Chandra Bose birth anniversary celebration