ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ನೂತನ ಹಂಗಾಮಿ ಕುಲಪತಿ ನೇಮಕ 

ವಿಜಯಪುರ,ಡಿಸೆಂಬರ್,14,2020(www.justkannada.in) : ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ನೂತನ ಹಂಗಾಮಿ ಕುಲಪತಿಯಾಗಿ ಕಲಾ ನಿಕಾಯದ ಡೀನ್ ಪ್ರೊ.ನಾಮದೇವ ಗೌಡ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.logo-justkannada-mysore

ಸೋಮವಾರ ಬೆಳಗ್ಗೆ ನೂತನ ಹಂಗಾಮಿ ಕುಲಪತಿ ಪ್ರೊ.ನಾಮದೇವಗೌಡ ಅವರಿಗೆ ಹಿಂದಿನ ಹಂಗಾಮಿ ಕುಲಪತಿಯಾಗಿದ್ದ ಪ್ರೊ.ಓಂಕಾರ ಕಾಕಡೆ ಅವರು ಅಧಿಕಾರ ಹಸ್ತಾಂತರಿಸಿದರು. ಪ್ರೊ.ನಾಮದೇವಗೌಡ ಅವರ ಅಧಿಕಾರದ ಅವಧಿ ಜ.31ರ ವರೆಗೆ ಇರುತ್ತದೆ ಎಂದು ರಾಜ್ಯಪಾಲರು ಆದೇಶದಲ್ಲಿ ತಿಳಿಸಿದ್ದಾರೆ.

ಕುಲಸಚಿವೆ ಪ್ರೊ.ಆರ್.ಸುನಂದಮ್ಮ, ಮೌಲ್ಯಮಾಪನ ಕುಲಸಚಿವ ಪ್ರೊ.ಪಿ.ಜಿ.ತಡಸದ, ಆರ್ಥಿಕ ಅಧಿಕಾರಿ ಪ್ರೊ.ವಿಜಯಾ ಕೋರಿಶೆಟ್ಟಿ. ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

New-Chancellor-Akkamahadevi-Women's- University-appointed

key words : New-Chancellor-Akkamahadevi-Women’s- University-appointed