ಬೆಂಗಳೂರಿಗೆ ಕೇಂದ್ರ ವೀಕ್ಷಕರ ಆಗಮನ: ಇತ್ತ ಬಿಎಸ್ ವೈ ಭೇಟಿ ಮಾಡಿ ಚರ್ಚಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್.

ಬೆಂಗಳೂರು,ಜುಲೈ,27,2021(www.justkannada.in):  ರಾಜ್ಯದ ನೂತನ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ನೇಮಿಸಿರುವ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ.jk

ನೂತನ ಸಿಎಂ ಆಯ್ಕೆ ಸಂಬಂಧ  ಇಂದು ಸಂಜೆ 7 ಗಂಟೆಗೆ  ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು ಸಭೆಯಲ್ಲಿ ಕೇಂದ್ರದ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಶಾಸಕರ ಅಭಿಪ್ರಾಯ ಆಲಿಸಲಿದ್ದು ನಂತರ ನೂತನ ಸಿಎಂ ಘೋಷಣೆಯಾಗುವ ಸಾಧ್ಯತೆ ಇದೆ.

ಇನ್ನು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಬ್ಬರು ನಾಯಕರನ್ನ ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು. ಇನ್ನೊಂದೆಡೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇಂದು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಉಸ್ತುವಾರಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

Key words: new-CM- choice-Arrival -Central Visitors – Bangalore.