ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ: ಬಜೆಟ್ ನಲ್ಲಿ ಘೋಷಣೆ

ಬೆಂಗಳೂರು,ಮಾರ್ಚ್,6,2026 (www.justkannada.in): ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಇಂದು ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ,  ಬೆಲೆ ನಿಗದಿ ಮಾಡುವ ಜವಾಬ್ದಾರಿ ಉತ್ಪಾದಕರ ಹೆಗಲಿಗೆ ಬಿದ್ದಿದೆ, ಮದ್ಯದ ಉತ್ಪಾದಕರಿಗೆ ಹೊಸ ಜವಾಬ್ದಾರಿಯನ್ನು ಸರ್ಕಾರ ಕೊಟ್ಟಿದೆ. ಸರ್ಕಾರದಿಂದ ಮದ್ಯದ ಬೆಲೆ ನಿರ್ಧಾರ ಆಗುವುದಿಲ್ಲ, ಇನ್ಮುಂದೆ ಮದ್ಯದ ಬೆಲೆ ಏರಿಕೆ ಉತ್ಪಾದಕರೇ ಮಾಡಬೇಕು ಎಂದು  ತಿಳಿಸಿದ್ದಾರೆ.

ಅಬಕಾರಿ ಇಲಾಖೆ ಇಲಾಖೆಯಲ್ಲಿ 45,000 ಕೋಟಿ ರೂ. ಆದಾಯ ಸಂಗ್ರಹದ ಗುರಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ಅನುದಾನ

ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Key words: New excise policy, implemented, Budget, CM Siddaramaiah