Sunday, August 23, 2026

BDA Apartments

Home Front Page ಹೊಸ ವರ್ಷಾಚರಣೆಗೆ ಇಂದು ನೂತನ ಮಾರ್ಗಸೂಚಿ ಪ್ರಕಟ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೊಸ ವರ್ಷಾಚರಣೆಗೆ ಇಂದು ನೂತನ ಮಾರ್ಗಸೂಚಿ ಪ್ರಕಟ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಡಿಸೆಂಬರ್ 25, 2022 (www.justkannada.in): ಹೊಸ ವರ್ಷಾಚರಣೆಗೆ ನೂತನ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ‌ ಮಾತನಾಡಿದ ಸಿಎಂ, ಕಂದಾಯ‌ ಸಚಿವ ಆರ್.ಅಶೋಕ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಇಂದು ಸಭೆ ನಡೆಸಿ, ಮಾರ್ಗಸೂಚಿ ಪ್ರಕಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಬೂಸ್ಟರ್ ಡೋಸ್‌ ನೀಡಲು ತಾಲ್ಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಶಿಬಿರ ಏರ್ಪಡಿಸಬೇಕು. ಆರೋಗ್ಯ ಪರಿಕರಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಂಡು, ಔಷಧ ಹಾಗೂ ಲಸಿಕೆ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಚುನಾವಣೆಗೆ ಇನ್ನೂ ಸಮಯ ಇರುವುದರಿಂದ ಕಾಂಗ್ರೆಸ್ ನಾಯಕರಲ್ಲಿ ಒಳಜಗಳಗಳು ಹೆಚ್ಚಾಗುತ್ತಿವೆ. ಅದಕ್ಕಾಗಿ ಕಾರ್ಯಕರ್ತರಿಗೆ ಅವಧಿಪೂರ್ವ ಚುನಾವಣೆ ನಡೆಯುತ್ತದೆ ಎಂದು ಸಂದೇಶ ನೀಡುತ್ತಿದ್ದಾರೆ’ ಎಂದು ಬೊಮ್ಮಾಯಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.