ಇಂದು ರಾತ್ರಿ 10 ಗಂಟೆಗೆ ನೂತನ ಸಚಿವರ ಪಟ್ಟಿ ಬಿಡುಗಡೆ- ಡಿಸಿಎಂ ಅಶ್ವಥ್ ನಾರಾಯಣ್ …

ಚಿಕ್ಕಬಳ್ಳಾಪುರ,ಫೆ,5,2020(www.justkannada.in):  ಇಂದು ರಾತ್ರಿ 10 ಗಂಟೆಗೆ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಲಿದ್ದು, ನಾಳೆ ಸಂಪುಟ ವಿಸ್ತರಣೆ ಶತಃಸಿದ್ಧ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ನಾಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚಿಕ್ಕಬಳ್ಳಾಪುರ ಶಿಡ್ಲಘಟ್ಟ ಅಮರಾವತಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್,  ನಾಳೆ ಸಚಿವ ಸಂಪುಟ ಸೇರುವವರ ಪಟ್ಟಿ ಇಂದು ರಾತ್ರಿ 10 ಗಂಟೆಗೆ ಬಿಡುಗಡೆಯಾಗಲಿದೆ. ನಾಳೆ ಬೆಳಿಗ್ಗೆ 10.30ಕ್ಕೆ ಸಂಪುಟ ವಿಸ್ತರಣೆ ಖಚಿತ. ಯಾರು, ಎಷ್ಟು ಜನ ಸಂಪುಟ ಸೇರುತ್ತಾರೆ ಎಂಬುದನ್ನ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಲಿದ್ದಾರೆ ಎಂದು ತಿಳಿಸಿದರು.

Key words: New list –ministers- released -today – DCM- Ashwath Narayan