Monday, September 28, 2026

BDA Apartments

ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಅನುಮಾನಾಸ್ಪದ ಸಾವು… BDA J...
Home Crime ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಅನುಮಾನಾಸ್ಪದ ಸಾವು….

ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಅನುಮಾನಾಸ್ಪದ ಸಾವು….

ಮೈಸೂರು,ಜೂ,4,2019(www.justkannada.in):  ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲ್ಲೂಕಿನಲ್ಲಿ ನಡೆದಿದೆ.

ಕೆ.ಆರ್.ನಗರ ತಾಲ್ಲೂಕಿನ ಹಂಪಾಪುರದಲ್ಲಿ ಈ ಘಟನೆ ನಡೆದಿದೆ. ಜ್ಯೋತಿ(24) ಮೃತಪಟ್ಟ ನವವಿವಾಹಿತೆ. ಹುಣಸೂರು ತಾಲೂಕಿನ ಹೊಸರಾಮನಹಳ್ಳಿ ನಿವಾಸಿಯಾದ ಜ್ಯೋತಿ ಎರಡು ತಿಂಗಳ ಹಿಂದೆ ಹಂಪಾಪುರದ ಉಮೇಶ್  ವಿವಾಹವಾಗಿದ್ದರು. ಉಮೇಶ್ ವೃತ್ತಿಯಲ್ಲಿ ಚಾಲಕನಾಗಿದ್ದಾನೆ.

ಈ ನಡುವೆ ನೇಣುಬಿಗಿದ ಸ್ಥಿತಿಯಲ್ಲಿ ಜ್ಯೋತಿ ಶವ ಪತ್ತೆಯಾಗಿದ್ದು ತಮ್ಮ ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: New married women suspect death in Mysore.

#mysore # Newmarried #suspect #death crimenews