ಲಸಿಕೆ ನೀಡಿಕೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ಹಿನ್ನೆಲೆ: ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು.

 

ನವದೆಹಲಿ,ಅಕ್ಟೋಬರ್,22,2021(www.justkannada.in):  ಕೊರೋನಾ ಲಸಿಕೆ ನೀಡಿಕೆಯಲ್ಲಿ ಭಾರತ ಹೊಸ ದಾಖಲೆ ಮಾಡಿದ್ದು 100 ಕೋಟಿ ಡೋಸ್ ನೀಡಲಾಗಿದ್ದು ಈ ಮೂಲಕ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ.

ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಥಾಪಿಸಿದೆ. ಶತಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದೆ. ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಾಗಿದೆ. ಭಾರತದ ಸಾಧನೆಗೆ ವಿಶ್ವಸಂಸ್ಥೆ ಮತ್ತು ಜಾಗತಿಕ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ.no change –MSP-Prime Minister –narendra Modi -clarified.

ಕೋವಿಡ್ ವಿರುದ್ಧ ಭಾರತ 100 ಕೋಟಿ ಡೋಸ್ ಲಸಿಕೆ ಸುರಕ್ಷಾ ಕವಚ ಸಾಧಿಸಿದೆ. ಭಾರತೀಯ ವಿಜ್ಞಾನ, ಉದ್ಯಮ ಮತ್ತು ದೇಶದ ಜನರ ಸಾಮೂಹಿಕ ಸ್ಪೂರ್ತಿಗೆ ಸಂದ ಜಯ ಇದಾಗಿದೆ ಎಂದು ಸಂಭ್ರಮ ಹಂಚಿಕೊಂಡ ಪ್ರಧಾನಿ ಮೋದಿ, ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದ್ದರು.

Key words:  new milestone – vaccination- PM Modi -talks – country.