Saturday, September 19, 2026

BDA Apartments

Home Front Page ನೂತನ ಸಚಿವರಾಗಿ ರಾಯರೆಡ್ಡಿ, ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ ಪ್ರಮಾಣ ವಚನ

ನೂತನ ಸಚಿವರಾಗಿ ರಾಯರೆಡ್ಡಿ, ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ ಪ್ರಮಾಣ ವಚನ

ಬೆಂಗಳೂರು,ಆಗಸ್ಟ್,3,2026 (www.justkannada.in):  ಇಂದು ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು 20 ಶಾಸಕರು ನೂತನ ಸಚಿವರಾಗಿ ಸಂಪುಟ ಸೇರಿದ್ದಾರೆ.

ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದು ನೂತನ ಸಚಿವರಾಗಿ  ಬಸವರಾಜ ರಾಯರೆಡ್ಡಿ ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ ಬಿ. ನಾಗೇಂದ್ರ, ಎಸ್ ಎಸ್ ಮಲ್ಲಿಕಾರ್ಜುನ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು.ನೂತನ ಸಚಿವರಾಗಿ ರಾಯರೆಡ್ಡಿ oath.jpg1

ಸಮಾರಂಭದಲ್ಲಿ ಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್  ಸೇರಿ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದಾರೆ.ಚಲುವರಾಯಸ್ವಾಮಿ jk02_new jk02 new

Key words: Rayareddy, Chaluvarayaswamy, Lakshman Savadi, Madhu Bangarappa, new ministers