Monday, September 21, 2026

BDA Apartments

ಮುಂದಿನ 3 ವರ್ಷದಲ್ಲಿ ಎಲ್ಲಾ ಹೊಸ ತಾಲ್ಲೂಕುಗಳಿಗೂ ಸ್ವಂತ ಆಡಳಿತ ಕಚೇರಿ- ಸಚಿವ ...
Home Front Page ಮುಂದಿನ 3 ವರ್ಷದಲ್ಲಿ ಎಲ್ಲಾ ಹೊಸ ತಾಲ್ಲೂಕುಗಳಿಗೂ ಸ್ವಂತ ಆಡಳಿತ ಕಚೇರಿ- ಸಚಿವ ಕೃಷ್ಣ ಭೈರೇಗೌಡ

ಮುಂದಿನ 3 ವರ್ಷದಲ್ಲಿ ಎಲ್ಲಾ ಹೊಸ ತಾಲ್ಲೂಕುಗಳಿಗೂ ಸ್ವಂತ ಆಡಳಿತ ಕಚೇರಿ- ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು,ಜುಲೈ,22,2024 (www.justkannada.in): ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ 64 ಹೊಸ ತಾಲ್ಲೂಕುಗಳಿಗೂ ಸ್ವಂತ ಆಡಳಿತ ಕಚೇರಿ ನಿರ್ಮಾಣ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ವಿಧಾನಸಭೆ ಕಲಾಪದಲ್ಲಿ ಇಂದು ಉತ್ತರ ನೀಡಿದ ಸಚಿವ ಕೃಷ್ಣಭೈರೇಗೌಡ ,  ಹೊಸ ತಾಲ್ಲೂಕುಗಳು ರಚನೆಯಾಗಿ 6 ವರ್ಷಗಳಾದರೂ 14 ತಾಲೂಕುಗಳಲ್ಲಿ ಮಾತ್ರ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಉಳಿದ ತಾಲೂಕುಗಳಿಗೆ ಇನ್ನೂ ಸರ್ಕಾರಿ ಕಟ್ಟಡಗಳು ಮಂಜೂರೇ ಆಗಿಲ್ಲ. ಈ ಬಗ್ಗೆ ನಾನು ಹಿಂದಿನ ಅಧಿವೇಶನದಲ್ಲೇ ಹೇಳಿದ್ದೇನೆ. ಮುಂದಿನ ಮೂರು ವರ್ಷದಲ್ಲಿ ಎಲ್ಲಾ ಹೊಸ ತಾಲೂಕುಗಳಿಗೂ ತಾಲೂಕು ಆಡಳಿತ ಕಚೇರಿ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.ಮುಂದಿನ 3 ವರ್ಷದಲ್ಲಿ ಎಲ್ಲಾ ಹೊಸ ತಾಲ್ಲೂಕುಗಳಿಗೂ ಸ್ವಂತ ಆಡಳಿತ ಕಚೇರಿ krishnabyregowda

ಏನೇ ಸವಾಲು ಬಂದರೂ ಸಹ ಹೊಸ ತಾಲ್ಲೂಕುಗಳಿಗೆ ನಾವು ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಿಕೊಡುತ್ತೇವೆ. ಸಿಬ್ಬಂದಿ ನಿಯೋಜನೆಯನ್ನೂ ಮಾಡಿಕೊಡಲಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸಲು ಪ್ರಯತ್ನಿಸಲಾಗುವುದು   ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

Key words: new taluks, administrative office, Minister, Krishnabhairegowda