ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಖಾಕಿ ಕಟ್ಟೆಚ್ಚರ: ಬಿಗಿ ಪೊಲೀಸ್ ಬಂದೋಬಸ್ತ್

ಬೆಂಗಳೂರು, ಡಿಸೆಂಬರ್,31,2025 (www.justkannada.in): ಹೊಸ ವರ್ಷಾಚರಣೆ ಸಂಭ್ರಮಿಸಲು ರಾಜ್ಯ ರಾಜಧಾನಿ ಬೆಂಗಳೂರು  ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್‌ನಂತಹ ಪ್ರಮುಖ ಕೇಂದ್ರಗಳು ದೀಪಾಲಂಕಾರದಿಂದ ಜಗಮಗಿಸುತ್ತಿವೆ. ಎಂ.ಜಿ ರಸ್ತೆಯಲ್ಲಿ ಎರಡೂ ಬದಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದ್ದು,  ಭದ್ರತೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.  ಪ್ರಮುಖ ರಸ್ತೆಗಳಲ್ಲಿ ವಾಚ್ ಟವರ್  ನಿರ್ಮಿಸಿ ನಿಗಾ ವಹಿಸಲಾಗಿದೆ.  66 ಕಡೆಗಳಲ್ಲಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಲಾಗುತ್ತಿದ್ದು, 6 ಸಾವಿರಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ ಮಾಡಲಾಗಿದೆ.

ನಗರದಾದ್ಯಂತ ಸುಮಾರು 20,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ವಾಚ್‌ಟವರ್‌ಗಳನ್ನು ನಿರ್ಮಿಸಿ ಪೊಲೀಸರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ. ಹಾಗೆಯೇ 92 ವೀಲಿಂಗ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ.

ಮಹಿಳಾ ಸುರಕ್ಷತೆಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದ್ದು ಕ್ಯೂಆರ್‌ಟಿ, ಚೆನ್ನಮ್ಮ ಪಡೆ ಸೇರಿ ವಿಶೇಷ ಪೊಲೀಸ್ ಪಡೆ ನಿಯೋಜನೆ ಮಾಡಲಾಗುತ್ತದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

Key words: New Year, celebrations, Bengaluru, Tight, police, deployment