ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡಲಿ- ಸತೀಶ್ ಜಾರಕಿಹೊಳಿ.

ಬೆಂಗಳೂರು,ಮೇ,20, 2023(www.justkannada.in):  ಸಿದ್ಧರಾಮಯ್ಯ ಅವರ ಸಚಿವ ಸಂಪುಟದಲ್ಲಿ 10 ಮಂದಿ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಲಹೆ ನೀಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸತೀಶ್ ಜಾರಕಿಹೊಳಿ, ಪ್ರಥಮ ಹಂತದಲ್ಲಿ 8 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಡಿ.ಕೆ. ಶಿವಕುಮಾರ್ ಮಾತ್ರ ಉಪಮುಖ್ಯಮಂತ್ರಿ ಆಗಿರುತ್ತಾರೆ. ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವಂತೆ ಸಲಹೆ  ನೀಡುತ್ತೇನೆ ಎಂದರು.

ಮುಂದೆ ಉಳಿದ ಸ್ಥಾನಗಳನ್ನು ಭರ್ತಿ ಮಾಡುತ್ತೇವೆ. ಕನಿಷ್ಠ 10 ಮಂದಿಗಾದರೂ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು. ಇನ್ನು ಮೊದಲ ಸಂಪುಟದಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ.  ನನಗೆ ಯಾವ ಖಾತೆ ಎಂಬ ಬಗ್ಗೆ ಪಕ್ಷ ತೀರ್ಮಾನ ಮಾಡಲಿದೆ ಸತೀಶ್ ಜಾರಕಿಹೊಳಿ ತಿಳಿಸಿದರು.

Key words: newcomers – given- chance – cabinet- Sathish Jarakiholi.