ಹನುಮನ ಜನ್ಮಸ್ಥಳ ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ 100 ಕೋಟಿ ರೂ.: ಸಿಎಂ ಬಸವರಾಜ ಬೊಮ್ಮಾಯಿ

Promotion

ಬೆಂಗಳೂರು, ಏಪ್ರಿಲ್ 03, 2022 (www.justkannada.in): ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿಗೆ ರಾಜ್ಯ ಸರ್ಕಾರ 100 ಕೋಟಿ ರೂ. ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದೇ ವರ್ಷ ಯೋಜನೆ ಸಿದ್ದಪಡಿಸಿ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲಾಗುವುದು. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಯ ಕೆಲಸ ಈ ವರ್ಷವೇ ಪ್ರಾರಂಭವಾಗಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ ಕೋಟೆ ಮೈದಾನದಲ್ಲಿ ಶ್ರೀ ರಾಮ ಸೇವಾ ಮಂಡಳಿ, ರಾಮನವಮಿ ಉತ್ಸವ ಸಮಿತಿ ಅವರು ಏರ್ಪಡಿಸಿದ್ದ 84ನೇ ಶ್ರೀ ರಾಮನವಮಿ ಸಂಗೀತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ.

ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿಗೆ ರಾಜ್ಯ ಸರ್ಕಾರ 100 ಕೋಟಿ ರೂ. ಅನುದಾನ ನೀಡಲಿದೆ ಎಂದು ತಿಳಿಸಿದ್ದಾರೆ.