ದೇಶದಲ್ಲಿ ಒಂದೇ ದಿನ 2.64 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆ.

ನವದೆಹಲಿ,ಜನವರಿ,14,2022(www.justkannada.in):   ದೇಶದಲ್ಲಿ ಕೊರೊನಾ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,64,202 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,64,202 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಕೊರೋನಾಗೆ 315 ಜನರು ಸಾವನ್ನಪ್ಪಿದ್ದು, ಒಟ್ಟಾರೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 4,85,350ಕ್ಕೆ ತಲುಪಿದೆ.

ದೇಶದಲ್ಲಿ ಪ್ರಸ್ತುತ 12,72,073 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ.14.78ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 1,09,345 ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,48,24,706 ಕ್ಕೆ ಏರಿಕೆಯಾಗಿದೆ.  ಇನ್ನು ದೇಶದಲ್ಲಿ ಒಟ್ಟು 5,753 ಒಮಿಕ್ರಾನ್ ಪ್ರಕರಣಗಳಿವೆ. ಹಾಗೆಯೇ 155.39 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

Key words: 2.64 lakh- Covid cases- detected – single day