ದೇಶದಲ್ಲಿ ಒಂದೇ ದಿನ 2,76,070 ಕೋವಿಡ್ ಪ್ರಕರಣಗಳು ಪತ್ತೆ…

Promotion

ನವದೆಹಲಿ,ಮೇ,20,2021(www.justkannada.in): ದೇಶಾದ್ಯಂತ ಕೊರೊನಾ 2ನೇ ಅಲೆ ನಗರ ಪ್ರದೇಶದ ಜತೆಗೆ ಗ್ರಾಮೀಣ ಭಾಗದಲ್ಲೂ ಹೆಚ್ಚಾಗಿ ಹರಡುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2.76ಲಕ್ಷಕ್ಕೂ ಅಧಿಕ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.jk

ಕೇಂದ್ರ ಆರೋಗ್ಯ ಇಲಾಖೆ  ಈ ಕುರಿತು ಮಾಹಿತಿ ನೀಡಿದ್ದು, ಒಂದೇ ದಿನದಲ್ಲಿ ದೇಶಾದ್ಯಂತ 2,76,070 ಮಂದಿಗೆ ಕೊರೋನ ಗತುಲಿದೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,57,72,400ಕ್ಕೆ ಏರಿಕೆಯಾಗಿದೆ. ಅಂತೆಯೇ  ಕಳೆದ 24 ಗಂಟೆಯಲ್ಲಿ 3,874 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 2,87,122 ಕ್ಕೆ ಏರಿಕೆಯಾಗಿದೆ.276070-covid-cases-detected-single-day-country

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 3,69,077 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,23,55,440ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 31,29,878 ಸಕ್ರಿಯ ಪ್ರಕರಣಗಳಿವೆ.

Key words: 2,76,070 Covid cases- detected -single day – country.