5 ಮತ್ತು 8ನೇ ತರಗತಿ ಬೋರ್ಡ್​ ಪರೀಕ್ಷೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ.

ನವದೆಹಲಿ,20,2023(www.justkannada.in):  5, 8ನೇ ತರಗತಿ ಬೋರ್ಡ್​ ಪರೀಕ್ಷೆ ಕುರಿತು ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅನುದಾನರಹಿತ ಖಾಸಗಿ ಶಾಲೆಗಳ ಸಂಘ  ಮೇಲ್ಮನವಿ ಸಲ್ಲಿಸಿದೆ.

ಅಲ್ಲದೆ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ಗೆ  ವಕೀಲರು ಮನವಿ ಮಾಡಿದ್ದು, ಮಾರ್ಚ್ 27ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್  ಸಿಜೆಐ  ಹೇಳಿದ್ದಾರೆ.

ಮತ್ತೊಂದೆಡೆ ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಅಷ್ಟರೊಳಗೆ ಮೇಲ್ಮನವಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿದ್ದಾರೆ. ಆದರೆ ಸಿಜೆಐ ಡಿ.ವೈ.ಚಂದ್ರಚೂಡ್ ವಕೀಲರ ಮನವಿ ತಿರಸ್ಕರಿಸಿದ್ದಾರೆ.

​ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮವೆಂದು ಹೈಕೋರ್ಟ್​ಗೆ ಗೊತ್ತಿದೆ. ನಾವು 4,000 ಶಾಲೆಗಳನ್ನು ಪ್ರತಿನಿಧಿಸುತ್ತೇವೆ. ನಮ್ಮ ವಾದ ಆಲಿಸಬೇಕೆಂದು ಸಿಜಿಐ ಚಂದ್ರಚೂಡ್​ ಅವರಿಗೆ ವಕೀಲರು ಮನವಿ ಮಾಡಿದ್ದಾರೆ. ವಕೀಲರ ವಾದದ ಬಳಿಕ ಮಾರ್ಚ್ 27 ರಂದೇ ವಿಚಾರಣೆ ನಡೆಸುವುದಾಗಿ ಸಿಜೆಐ ತಿಳಿಸಿದ್ದಾರೆ.

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿತ್ತು. ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿತ್ತು.

Key words: 5th and 8th-class –board- examination- Supreme Court – High Court- order.