APP-CUM-AGP ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ: ಇಲಾಖಾ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶ.

ಬೆಂಗಳೂರು,ಜೂನ್,6,2023(www.justkannada.in): APP-CUM-AGP(ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ)  ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ಇಲಾಖಾ ತನಿಖೆ  ನಡೆಸಿ ವರದಿ ಸಲ್ಲಿಸುವಂತೆ ಸಿಎಂ ಸಿದ್ಧರಾಮಯ್ಯ  ಆದೇಶ ಹೊರಡಿಸಿದ್ದಾರೆ.

ದಿನಾಂಕ:23-07-2022 ಮತ್ತು 24-07-2022ರಂದು ನಡೆದ APP-CUM-AGP (ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ) ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ ಅಕ್ರಮಗಳು ನಡೆದಿರುವುದಾಗಿ ವ್ಯಾಪಕವಾದ ದೂರುಗಳು ಸಲ್ಲಿಕೆಯಾಗಿದೆ. ಈ ಬಗ್ಗೆ ಕೂಡಲೇ ನಿರ್ದಾಕ್ಷಿಣ್ಯವಾದ ಇಲಾಖಾ ತನಿಖೆ ನಡೆಸಿ ತಪ್ಪಿತಸ್ಥರ ವಿವರಗಳೊಂದಿಗೆ 10 ದಿನಗಳೊಳಗಾಗಿ ವರದಿ ಸಲ್ಲಿಸುವಂತೆ  ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ  ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ.

Key words: Allegation – illegality – APP-CUM-AGP -recruitment – Order – departmental -inquiry