ಮೂರು ತಿಂಗಳಲ್ಲಿ ಬನಶಂಕರಿ ಸ್ಕೈವಾಕ್ ಸಾರ್ವಜನಿಕರ ಬಳಕೆಗೆ ಲಭ್ಯ- ಸಂಸದ ತೇಜಸ್ವಿ ಸೂರ್ಯ

kannada t-shirts

ಬೆಂಗಳೂರು,ನ,8,2019(www.justkannada.in): ಬೆಂಗಳೂರಿನ ಬನಶಂಕರಿ ಬಸ್ ನಿಲ್ದಾಣದ ಬಳಿ ಉಂಟಾಗಿರುವ ಸಂಚಾರ ದಟ್ಟಣೆ ನಿವಾರಿಸಲು ಸ್ಕೈವಾಕ್ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಈ ಕಾಮಗಾರಿ ಮೂರು ತಿಂಗಳ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಬೆಂಗಳೂರು ದಕ್ಷಿಣದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಬನಶಂಕರಿಯಲ್ಲಿ ದಿನಂಪ್ರತಿ ಸಾವಿರಾರು ಸಾರ್ವಜನಿಕರು ಸಂಚಾರ ದಟ್ಟಣೆಯಿಂದ ನಲುಗಿ ಹೋಗಿದ್ದಾರೆ. ಮೆಟ್ರೋ ನಿಲ್ದಾಣ ಮತ್ತು ಬಸ್ ನಿಲ್ದಾಣದ ನಡುವೆ ಸ್ಕೈವಾಕ್ ನಿರ್ಮಿಸಿದರೆ ಇದಕ್ಕೆ ಪರಿಹಾರ ಕಲ್ಪಿಸಲು ಸಾಧ್ಯ ಎಂದು ಮನಗಂಡಿರುವ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಕಂದಾಯ ಸಚಿವ ಆರ್ ಅಶೋಕ್, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಅವರೊಂದಿಗೆ ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿದರು.

ಬನಶಂಕರಿ ಬಸ್ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣಗಳ ಮಧ್ಯೆ ನೇರವಾಗಿ ಸ್ಕೈವಾಕ್ ನಿರ್ಮಾಣ ಮಾಡಿದಲ್ಲಿ ಪ್ರಯಾಣಿಕರಿಗೆ ಹಾಗೂ ಪಾದಚಾರಿಗಳಿಗೆ ಬಹಳಷ್ಟು ಪ್ರಯೋಜನವಾಗಲಿದ್ದು ,ಈ ಕೂಡಲೇ ಕಾಮಗಾರಿ ಆರಂಭಿಸಿ ಮುಂದಿನ ಮೂರು ತಿಂಗಳ ಒಳಗಾಗಿ ಸಾರ್ವಜನಿಕ ಸೇವೆಗೆ ಮುಕ್ತವಾಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಸ್ಕೈವಾಕ್ ನಿರ್ಮಾಣಕ್ಕೆ ಅನಗತ್ಯ ವಿಳಂಬ ಮಾಡಿ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ದ ಕಿಡಿಕಾರಿದ ಕಂದಾಯ ಸಚಿವ ಆರ್ ಅಶೋಕ್, ಅಂತಹ ಅಧಿಕಾರಿಗಳನ್ನು ಅಮಾನತು ಮಾಡುವ ಎಚ್ಚರಿಕೆ ನೀಡಿದರು. ಸ್ಕೈವಾಕ್ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದ್ದು ಇದೊಂದು ಪ್ರಯೋಗಿಕ ಯೋಜನೆಯಾಗಿ ರೂಪುಗೊಳ್ಳಲಿದೆ ಎಂದರು. ಈ ಸಂಧರ್ಭದಲ್ಲಿ ಸ್ಮಾರ್ಟ್ ಸಿಟಿ ಸಿಇಒ, BMTC ,BMRCL ಅಧಿಕಾರಿಗಳು ಹಾಜರಿದ್ದರು.

Key words: Banashankari Skywalk – available – public -use – three months- MP Tejasvi Surya

website developers in mysore