ಗೋವಾದಲ್ಲಿ  ಹಾವು ಏಣಿ ಆಟ: ಮ್ಯಾಜಿಕ್ ನಂಬರ್ ನತ್ತ ಬಿಜೆಪಿ  

ನವದೆಹಲಿ,ಮಾರ್ಚ್,10,2022(www.justkannada.in): ಉತ್ತರ ಪ್ರದೇಶ, ಪಂಜಾಬ್​, ಗೋವಾ, ಮಣಿಪುರ ಮತ್ತು ಉತ್ತರಾಖಂಡ ಪಂಚರಾಜ್ಯಗಳ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ.  ಗೋವಾದಲ್ಲಿ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ಪ್ರಬಲ ಪೈಪೋಟಿ  ಉಂಟಾಗಿದೆ.

ಈ ನಡುವೆ ಗೋವಾದಲ್ಲಿ ಅಧಿಕಾರ ಹಿಡಿಯಲು 40 ವಿಧಾನಸಭಾ ಕ್ಷೇತ್ರಗಳ ಪೈಕಿ  21 ಸ್ಥಾನ  ಗಳಿಸಬೇಕು. ಇದೀಗ ಬಂದ ಮಾಹಿತಿ ಪ್ರಕಾರ ಬಿಜೆಪಿ 20 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಮ್ಯಾಜಿಕ್ ನಂಬರ್ ನತ್ತ ಸಾಗುತ್ತಿದೆ. ಕಾಂಗ್ರೆಸ್​ 13 ಸ್ಥಾನಗಳೊಂದಿಗೆ ಬಿಜೆಪಿಗೆ ಫೈಟ್​ ನೀಡುತ್ತಿದೆ. 1 ಎಎಪಿ 5 ಇತರೆ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ಹಿನ್ನೆಡೆ ಅನುಭವಿಸಿದ್ದಾರೆ.

ಗೋವಾ ಉಸ್ತುವಾರಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಗೋವಾ ಕಾಂಗ್ರೆಸ್ ಉಸ್ತುವಾರಿಯಾಗಿ ಹಿರಿಯ ಮುಖಂಡ ದಿನೇಶ್ ಗುಂಡೂರಾವ್ ಕಾರ್ಯನಿರ್ವಹಿಸಿದ್ದರು.

Key words: BJP –reaches- magic number – Goa