ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಪ್ರಕಟ: ವೆಬ್ ಸೈಟ್ ನಲ್ಲಿ ಲಭ್ಯ..

ಬೆಂಗಳೂರು,21,2020(www.justkannada.in):  ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ  ಇಂದು ಪ್ರಕಟಗೊಂಡಿದೆ.

ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಡಿಸಿಎಂ ಅಶ್ವಥ್ ನಾರಾಯಣ್ ಸಿಇಟಿ ಫಲಿತಾಂಶ ಪ್ರಕಟಿಸಿದರು. http:/karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ೀ ವೇಳೆ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ವರಮಹಾಲಕ್ಷ್ಮಿ ಹಬ್ಬದಂದು ಪರೀಕ್ಷೆ ನಡೆಸಿದ್ದವು. ಗೌರಿಹಬ್ಬದಂದು ಸಿಇಟಿ ಫಲಿತಾಂಶ ಪ್ರಕಟಿಸುತ್ತಿದ್ದೇವೆ. ಸಿಇಟಿ ಪರೀಕ್ಷೆಗೆ 1,75,349 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದೇ ಮೊದಲ ಬಾರಿಗೆ ಪರೀಕ್ಷೆ ನಡೆದ 20 ದಿನಗಳಲ್ಲಿ ಫಲಿತಾಂಶ ನೀಡಲಾಗಿದೆ.CET -Result –Published-dcm ashwath narayan-Available - web site.

1,94,419 ವಿದ್ಯಾರ್ಥಿಗಳು ಪರೀಕ್ಷೆ ನೋಂದಣೆ ಮಾಡಿದ್ದರು. ಇದರಲ್ಲಿ1,74,345 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1,53,417 ವಿದ್ಯಾರ್ಥಿಗಳು ಎಂಜಿನಿಯರಿಂಗ್ ನಲ್ಲಿ ರ‍್ಯಾಂಕ್ ಪಡೆದಿದ್ದಾರೆ.

 

Key words: CET -Result –Published-dcm ashwath narayan-Available – web site.