ನಂದಿನಿ ಹಾಲಿನ ದರ ಹೆಚ್ಚಳ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯೆ

Promotion

ಬೆಂಗಳೂರು. ನವೆಂಬರ್ 15, 2022 (www.justkannada.in): ನಂದಿನಿ ಹಾಲಿನ ದರ ಏರಿಕೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ತಿಂಗಳ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಸೇಡಂನಲ್ಲಿ ಹಾಲಿನ ದರ ಪರಿಷ್ಕರಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಹಲವಾರು ತಿಂಗಳಿನಿಂದ ಚರ್ಚೆಯಾಗುತ್ತಿದೆ, ಈ ತಿಂಗಳ 20ನೇ ತಾರೀಖಿನ ಸಭೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.

ಸಂಕಷ್ಟಕ್ಕೆ ಸಿಲುಕಿರುವಂತ ರೈತರಿಗೆ ನೆರವಾಗುವ ನಿಟ್ಟಿನಲ್ಲಿ, ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡಲಾಗಿತ್ತು.