ಅಡುಗೆ ಅನಿಲ, ತೈಲಬೆಲೆ ಏರಿಕೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ…?

 

ಹುಬ್ಬಳ್ಳಿ,ಸೆಪ್ಟಂಬರ್,2, 2021(www.justkannada.in):  ‘ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ, ಈ  ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಸಿಎಂ ಬಸರವಾಜ ಬೊಮ್ಮಾಯಿ, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾದ ಕಾರಣ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಸೆ. 5 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಬರಲಿದ್ದು, ಅವರೊಂದಿಗೆ ಚರ್ಚಿಸಲಾಗುವುದು’ ಎಂದರು.

‘ಕೊರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳ ಗಡಿಯಿಂದ ರಾಜ್ಯಕ್ಕೆ ಬರುವಾಗ ಕೆಲವರು ಸುಳ್ಳು ಕೋವಿಡ್ ನೆಗಟಿವ್ ವರದಿ ಪಡೆದು ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ಕೋವಿಡ್ ನೆಗೆಟಿವ್ ನಕಲಿ ವರದಿ ತರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: CM -Basavaraja Bommai- increase –LPG gas -oil prices.