ಚುನಾವಣೆಯಲ್ಲಿ ಸ್ಪರ್ಧೆ ಖಚಿತ, ಯಾವ ಪಕ್ಷ ಎಂಬುದನ್ನು ನಾಳೆ ಪ್ರಕಟಿಸುತ್ತೇನೆ: ಜಗದೀಶ್ ಶೆಟ್ಟರ್

Promotion

ಬೆಂಗಳೂರು, ಏಪ್ರಿಲ್ 16, 2023 (www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಪಕ್ಷೇತರನಾಗಿ ಸ್ಪರ್ಧಿಸಬೇಕೋ ಅಥವಾ ಬೇರೆ ನಿರ್ಧಾರ ಕೈಗೊಳ್ಳಬೇಕೋ ಎಂಬುದರ ಕುರಿತು ಕಾರ್ಯಕರ್ತರ ಅಭಿಪ್ರಾಯ ಪಡೆದು ನಾಳೆ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.

ನನ್ನ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪ ಇಲ್ಲದಿದ್ದರೂ, ನನಗೆ ಟಿಕೆಟ್ ಸಿಕ್ಕಿಲ್ಲ. ಚುನಾವಣೆಗೆ ಸ್ಪರ್ಧಿಸುವ ಮೂಲಕ ತಕ್ಕ ತೀರುಗೇಟು ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಕೆಲವರಿಂದ ಪಕ್ಷ ಹಾಳಾಗುತ್ತಿದ್ದು, ಇದರಿಂದ, ಬಹಳ ಬೇಸರಗೊಂಡಿದ್ದೇನೆ. ನನ್ನ ವಿರುದ್ಧ ವ್ಯವಸ್ಥಿತವಾಗಿ ಷಡ್ಯಂತರ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.