ಕೊರೋನಾದಿಂದ ಗುಣಮುಖ: ಆಸ್ಪತ್ರೆಯಿಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಡಿಸ್ಚಾರ್ಜ್…

kannada t-shirts

ಬೆಂಗಳೂರು,ಏಪ್ರಿಲ್,24,2021(www.justkannada.in):  ಕೊರೋನಾ ಸೋಂಕು ತಗುಲಿ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.jk

ಕೊರೋನಾದಿಂದ ಗುಣಮುಖರಾದ ಹಿನ್ನೆಲೆ ಅಪೊಲೋ ಆಸ್ಪತ್ರೆಯಿಂದ ಹೆಚ್.ಡಿ ಕುಮಾರಸ್ವಾಮಿ ಡಿಸ್ಚಾರ್ಜ್ ಆಗಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಏಪ್ರಿಲ್ 17, 2021ರಂದು ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಹೀಗಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಸಿಗದ ಕಾರಣ, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಕುರಿತು  ಟ್ವಿಟ್  ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು ಎಂದಿದ್ದಾರೆ.Corona-cure-Former CM -HD Kumaraswamy –discharged- hospital.

ಇನ್ನೂ ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು  ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

Key words: Corona-cure-Former CM -HD Kumaraswamy –discharged- hospital.

website developers in mysore