ದೇಶಕ್ಕೆ ಮಾದರಿ ಮರಳು ನೀತಿ ಶೀಘ್ರದಲ್ಲೇ ಜಾರಿ : ಸಚಿವ ಮುರುಗೇಶ್ ನಿರಾಣಿ ವಿಶ್ವಾಸ

kannada t-shirts

ಬೆಂಗಳೂರು,ಫೆಬ್ರವರಿ,17,2021(www.justkannada.in) : ಕೈಗೆಟುಕುವ ದರದಲ್ಲಿ ಪ್ರತಿಯೊಬ್ಬರಿಗೂ ಮರಳು ಸಿಗುವಂತಹ ಹಾಗೂ ದೇಶಕ್ಕೆ ಮಾದರಿಯಾದ ಮರಳು ನೀತಿಯನ್ನು ಶೀಘ್ರದಲ್ಲೇ ಜಾರಿ ಮಾಡುವುದಾಗಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.jk

2021-26ಕ್ಕೆ ಅನ್ವಯವಾಗುವಂತೆ ಮಾದರಿಯಾಗುವ ನಿಟ್ಟಿನಲ್ಲಿ ಮರಳು ನೀತಿಯನ್ನು ತರಲಾಗುತ್ತಿದೆ. ಬೇರೆ ಬೇರೆ ರಾಜ್ಯಗಳು ಮರಳು ನೀತಿಯಲ್ಲಿ ಕರ್ನಾಟಕದ ಮಾದರಿಯನ್ನು ಅನುಸರಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಿದ್ದಾರೆ ಎಂದರು.

ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಪ್ರತಿಯೊಬ್ಬರಿಗೂ ಸುಲಭವಾಗಿ ಹಾಗೂ ಸರಳವಾಗಿ ಮರಳು ಸಿಗುವಂತೆ ಮಾಡುವ ಉದ್ದೇಶದಿಂದ ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿ ತರಲಾಗುವುದು ಎಂದು ಹೇಳಿದರು.

ಒಂದೊಂದು ಭಾಗಕ್ಕೆ ಪ್ರತ್ಯೇಕವಾದ ಮರಳು ನೀತಿ ಇದೆ

ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ ಸೇರಿದಂತೆ ಒಂದೊಂದು ಭಾಗಕ್ಕೆ ಪ್ರತ್ಯೇಕವಾದ ಮರಳು ನೀತಿ ಇದೆ. ಈಗಾಗಲೇ ಒಂದು ಕರಡನ್ನು ತಂದಿದ್ದೇವೆ. ಇದನ್ನೆಲ್ಲವನ್ನೂ ಬಗೆಹರಿಸುವ ಬಗ್ಗೆ ಈ ನೀತಿ ತರಲಾಗುತ್ತಿದೆ ಎಂದಿದ್ದಾರೆ.

ಎತ್ತಿನಗಾಡಿ, ಟ್ರ್ಯಾಕ್ಟರ್‍ ಗಳಲ್ಲಿ ತರಲು ಅವಕಾಶ ನೀಡಲಾಗುವುದು

ಗ್ರಾಮೀಣ ಭಾಗದಲ್ಲಿ ಆಶ್ರಯ ಮನೆಗಳಿಗೂ ಸಿಗುತ್ತಿರಲಿಲ್ಲ. ಇಲ್ಲಿಯವರೆಗೆ ಎಲ್ಲದಕ್ಕೂ ಕಡಿವಾಣವಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ ಎತ್ತಿನಗಾಡಿ, ಟ್ರ್ಯಾಕ್ಟರ್‍ ಗಳಲ್ಲಿ ತರಲು ಅವಕಾಶ ನೀಡಲಾಗುವುದು. ಮರಳು ಗಣಿಗಾರಿಕೆಗೆ ಬ್ಲಾಕ್‍ಗಳನ್ನು ಗುರುತಿಸಿ ಹರಾಜಿನ ಮೂಲಕ ಗುತ್ತಿಗೆ ನೀಡಿರುವ ಪ್ರದೇಶ ಹೊರತುಪಡಿಸಿ ಹಳ್ಳ, ತೊರೆಗಳಲ್ಲಿ ಸ್ವಂತ ಬಳಕೆಗೆ ದ್ವಿಚಕ್ರ ವಾಹನ, ಕತ್ತೆ, ಬಂಡಿ, ಟ್ರ್ಯಾಕ್ಟರ್ ಗಳಲ್ಲಿ ಕೊಂಡೊಯ್ಯುವ ಬಡವರು, ರೈತರಿಗೆ ಪರವಾನಗಿ, ರಾಯಲ್ಟಿಯಿಂದ ವಿನಾಯಿತಿ ನೀಡಲಾಗುವುದು ಎಂದು ಹೇಳಿದ್ದಾರೆ.

ಸರಕಾರದ ಬೊಕ್ಕಸಕ್ಕೆ ಆದಾಯ ಬರಬೇಕು

country,Model,Sand Policy,Coming Soon,Minister,Murugesh Nirani,Confidence
ಕೃಪೆ-internet

ಎಲ್ಲರಿಗೂ ಮರಳುಸಿಗಬೇಕು. ನೈಸರ್ಗಿಕವಾಗಿಯೂ ಅಪಾಯ ಆಗಬಾರದು. ಸರಕಾರದ ಬೊಕ್ಕಸಕ್ಕೆ ಆದಾಯ ಬರಬೇಕು. ಸಾರ್ವಜನಿಕರಿಗೂ ತೊಂದರೆಯಾಗಬಾರದು. ಇದು ನಮ್ಮ ಇಲಾಖೆಯ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.

key words : country-Model-Sand Policy-Coming Soon-Minister-Murugesh Nirani-Confidence

website developers in mysore