ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಹಾಗೂ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಾಜೀನಾಮೆ

Promotion

ನವದೆಹಲಿ,ಫೆಬ್ರವರಿ,28,2023(www.justkannada.in): ದೆಹಲಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಮನೀಶ್ ಸಿಸೋಡಿಯಾ ರಾಜೀನಾಮೆ ಸಲ್ಲಿಸಿದ್ದಾರೆ.

ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ  ಹಾಗೂ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಕೂಡ ರಾಜೀನಾಮೆ ನೀಡಿದ್ದಾರೆ, ಇಬ್ಬರ ರಾಜೀನಾಮೆಯನ್ನು ಸಿಎಂ ಅರವಿಂದ ಕೇಜ್ರಿವಾಲ್ ಅಂಗೀಕಾರ  ಮಾಡಿದ್ದಾರೆ.

ದೆಹಲ್ಲಿಯಲ್ಲಿ ಪ್ರಸ್ತುತ ರದ್ದುಗೊಂಡಿರುವ ನೂತನ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ನ್ಯಾಯಾಲಯ 5 ದಿನಗಳ ಕಾಲ ಮನೀಶ್ ಸಿಸೋಡಿಯಾರನ್ನ ಸಿಬಿಐ ವಶಕ್ಕೆ ನೀಡಿದೆ.

ಇನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಜೈಲುಪಾಲಾಗಿದ್ದಾರೆ.

Key words: Delhi DCM- Manish Sisodia – Health Minister- Satyendra Jain -resign