ತಿಂಗಳಲ್ಲಿ 10 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು,ಫೆಬ್ರವರಿ,28,2021(www.justkannada.in) : ಒಂದು ತಿಂಗಳಲ್ಲಿ ಎಲ್‌ಪಿಜಿ ಸಿಲಿಂಡರ್ ದರ 100 ರೂ. ಹಾಗೂ ಒಂದೂವರೆ ತಿಂಗಳಲ್ಲಿ 10 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.jkಎಲ್‌ಪಿಜಿ ಸಿಲಿಂಡರ್ ಹಾಗೂ ಒಂದೂವರೆ ತಿಂಗಳಲ್ಲಿ 10 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದಾಗಿ ಹಲವು ವಾಣಿಜ್ಯ ವಾಹನಗಳು, ಹಡಗುಗಳು ಆರ್ಥಿಕ ನಷ್ಟ ನಿಭಾಯಿಸಲು ಸಾಧ್ಯವಾಗದೇ ತಮ್ಮ ಕೆಲಸ ನಿಲ್ಲಿಸಿವೆ. ಇದನ್ನೇ ಅವಲಂಬಿಸಿರುವ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

During-month 10 Times-petrol-Diesel price-hike-President-KPCCD.K.Shivakumar 

ತೈಲ ಬೆಲೆ ಹೆಚ್ಚಳದಿಂದಾಗಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಈಗಾಗಲೇ ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಿರುವ ಜನಸಾಮಾನ್ಯರು ಈ ಬೆಲೆ ಏರಿಕೆಯ ದಿನಗಳಲ್ಲಿ ಗೃಹ ಬಳಕೆ ವಸ್ತುಗಳನ್ನೂ ಸಹ ಖರೀದಿಸಲಾಗದ ಸ್ಥಿತಿಗೆ ತಲುಪಿದ್ದಾರೆ. ನೋವನ್ನು ಜನರ ಧ್ವನಿಯಾಗಿ ಬಿಜೆಪಿ ಸರ್ಕಾರಕ್ಕೆ ತಲುಪಿಸುವ ಕಾರ್ಯವಾಗಬೇಕಿದೆ ಎಂದು ತಿಳಿಸಿದ್ದಾರೆ.

key words : During-month 10 Times-petrol-Diesel price-hike-President-KPCC
D.K.Shivakumar