ಯಾರಿಗೆ ಐಪಿಎಲ್ ಕಪ್ !? ದಿಲ್ಲಿ ಅಥವಾ ಮುಂಬೈ? ಕುತೂಹಲಕ್ಕೆ ಇಂದು ತೆರೆ

Promotion

ದುಬೈ, ನವೆಂಬರ್ 10, 2020 (www.justkannada.in): ಐಪಿಎಲ್ ಫೈನಲ್ ನಲ್ಲಿ ಇಂದು ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ನಾಲ್ಕು ಬಾರಿ ಟ್ರೋಫಿ ಗೆದ್ದಿದ್ದು ಈ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್‌ ಎರಡರಲ್ಲೂ ತುಂಬಾ ಬಲಿಷ್ಠವಾಗಿದೆ. ಇನ್ನೊಂದು ವಿಶೇಷವೆಂದರೆ ಎರಡು ತಂಡದ ನಾಯಕರು ಮುಂಬೈನವರೇ ಆಗಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊಟ್ಟ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದು ಈ ಬಾರಿ ತನ್ನ ಚೊಚ್ಚಲ ಟ್ರೋಫಿ ಎತ್ತಿ ಹಿಡಿಯುವ ಅವಕಾಶ ಸಿಕ್ಕಿದೆ.
ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರುತ್ತಲೇ ಇರುವ ಶಿಖರ್ ಧವನ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವು ತಂದುಕೊಡ್ತಾರ ನೋಡಬೇಕಿದೆ.