ಖ್ಯಾತ ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿಕೆ ಸಂತಾಪ..

Promotion

ಬೆಂಗಳೂರು,ಅಕ್ಟೋಬರ್, 12,2020(www.justkannada.in): ಖ್ಯಾತ ಸಂಗೀತ ನಿರ್ದೇಶಕ ರಾಜನ್ ಅವರ ನಿಧನಕ್ಕೆ ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. Former CM-HD kumaraswamy - condoles -death - music director- Rajan.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಖ್ಯಾತ ಸಂಗೀತ ನಿರ್ದೇಶಕ ರಾಜನ್ ಅವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ. ಕನ್ನಡದಲ್ಲಿ 175 ಕ್ಕೂ‌ಹೆಚ್ಚು ಚಿತ್ರಗಳಿಗೆ ಸಂಗೀತ ‌ನಿರ್ದೇಶನ ಮಾಡಿದ್ದ ಖ್ಯಾತಿ ರಾಜನ್-ನಾಗೇಂದ್ರ ‌ಜೋಡಿಯದ್ದಾಗಿತ್ತು.

ಗಂಧದಗುಡಿ, ಬಯಲುದಾರಿ, ಎರಡುಕನಸು, ಹೊಂಬಿಸಿಲು, ಆಟೋರಾಜ ಸೇರಿ ಹಲವಾರು ಚಿತ್ರಗಳ ಸಂಗೀತ ನಿರ್ದೇಶನ ಮಾಡಿದ್ದ ಅವರು ಕನ್ನಡ ಚಿತ್ರರಂಗದ ಸಂಗೀತದ ಘನತೆಯನ್ನು ಹೆಚ್ಚಿಸಿದ್ದವರು.former-cm-hd-kumaraswamy-condoles-death-music-director-rajan

ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಜನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

key words: Former CM-HD kumaraswamy – condoles -death – music director- Rajan.