ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್…

ನವದೆಹಲಿ,ಸೆ,25,2019(www.justkannada.in):  ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ನೀಡಲು ನವದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಿರಾಕರಿಸಿದೆ.

ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಅಜಯ್‌ ಕುಮಾರ್‌ ಕುಹರ್‌ ಅವರು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವ ಕುಮಾರ್ ಗೆ ತಿಹಾರ್ ಜೈಲೇ ಗತಿಯಾಗಿದೆ.

ಆರೋಗ್ಯ ಸರಿ ಇಲ್ಲದಿದ್ರೆ ಆಸ್ಪತ್ರೆಗೆ ಕರೆದೊಯ್ಯಬಹುದು. ಆರ್ ಎಂಎಲ್ ಆಸ್ಪತ್ರೆ ಅಥವಾ ಬೇರೆ ಆಸ್ಪತ್ರೆಗೆ ಕರೆದೊಯ್ಯಬಹುದು ಎಂದು ಕೋರ್ಟ್ ತಿಳಿಸಿದೆ.  ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಜಾಮೀನು ನೀಡುವಂತೆ ಕೋರಿ  ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ಸುಮಾರು ಒಂದು ವಾರಗಳ ಕಾಲ ವಾದ ಪ್ರತಿವಾದ ನಡೆದಿತ್ತು. ಬಳಿಕ ಜಡ್ಜ್ ಅಜಯ್ ಕುಮಾರ್ ಕುಹರ್ ಅವರು ಇಂದಿಗೆ ಜಾಮೀನು ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿದ್ದರು. ಇದೀಗ ಒಂದೇ ವಾಕ್ಯದಲ್ಲಿ ತೀರ್ಪು ನೀಡಿ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ.

ಡಿ.ಕೆ ಶಿವಕುಮಾರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು. ಇಡಿ ಪರ ಕೆ.ಎಂ ನಟರಾಜ್ ವಾದ ಮಂಡಿಸಿದ್ದರು. ಜಾಮೀನು ಕೋರಿ ನಾಳೆ ಡಿ.ಕೆ ಶಿವಕುಮಾರ್ ದೆಹಲಿ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

Key words: former minister -DK Sivakumar-Court –dismiss-bail application